alex Certify ಡಿಸಿಎಂ ಸೇರಿ 5 ಸಚಿವರಿಗೆ ಕೊರೋನಾ ಟೆಸ್ಟ್, ಕ್ವಾರಂಟೈನ್ ನಲ್ಲಿ ಮೂವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸಿಎಂ ಸೇರಿ 5 ಸಚಿವರಿಗೆ ಕೊರೋನಾ ಟೆಸ್ಟ್, ಕ್ವಾರಂಟೈನ್ ನಲ್ಲಿ ಮೂವರು

ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಸೇರಿದಂತೆ ಐವರು ಸಚಿವರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ನಾಲ್ವರ ವರದಿ ನೆಗೆಟಿವ್ ಬಂದಿದೆ.

ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಟಿ. ರವಿ, ಡಾ.ಕೆ. ಸುಧಾಕರ್ ಮತ್ತು ವಿ. ಸೋಮಣ್ಣ ಅವರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಕೊರೋನಾ ದೃಢಪಟ್ಟಿರುವ ಖಾಸಗಿ ವಾಹಿನಿ ಕ್ಯಾಮೆರಾಮನ್ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಐವರು ಸಚಿವರಿಗೆ ಕೊರೋನಾ ಭೀತಿ ಆವರಿಸಿದೆ. ಹಾಗಾಗಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಐವರಲ್ಲಿ ಮೂವರು ಸಚಿವರು ಕ್ವಾರಂಟೈನ್ ನಲ್ಲಿ ಇದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...