ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 1898 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 48,821 ಏರಿಕೆಯಾಗಿದೆ.
ಇವತ್ತು 572 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 12,761 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 35,102 ಸಕ್ರಿಯ ಪ್ರಕರಣಗಳಿದ್ದು ಇವತ್ತು ಒಂದೇ ದಿನ 40 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ 957 ಜನರು ಮೃತಪಟ್ಟಿದ್ದಾರೆ.