ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಭಾನುವಾರ ಒಂದೇ ದಿನ ಬರೋಬ್ಬರಿ 196 ಮಂದಿಗೆ ಸೋಂಕು ತಗುಲಿರುವ ವರದಿ ಬಂದಿದೆ.
ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ 12ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ಕರೆದಿದ್ದಾರೆ. ಆರೋಗ್ಯ ಇಲಾಖೆ, ಬಿಬಿಎಂಪಿ ಮತ್ತು ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಅಧಿಕಾರಿಗಳ ಸಭೆ ಕರೆಯಲಾಗಿದ್ದು ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.