ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವರು ಹಾಗೂ ತಜ್ಞವೈದ್ಯರ ಸಭೆ ನಡೆಸಲಾಗಿದ್ದು ಕೊರೋನಾ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ.
ಈ ಸಭೆಯಲ್ಲಿ ನಡೆದ ಚರ್ಚೆ ಮತ್ತು ಸಲಹೆಗಳ ಆಧಾರದ ಮೇಲೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು. ಈಗಾಗಲೇ ಚಿಕಿತ್ಸೆ ನೀಡಲು ಮಾರ್ಗಸೂಚಿ ನೀಡಲಾಗಿದೆ. ಜುಲೈ ತಿಂಗಳ ಅಂತ್ಯಕ್ಕೆ ಆಗಸ್ಟ್ ಎರಡನೇ ವಾರದೊಳಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 70 ಸಾವಿರದಿಂದ 1 ಲಕ್ಷದವರೆಗೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.
ಹೀಗಾಗಿ ಆಸ್ಪತ್ರೆಗಳ ಮೇಲಿನ ಹೊರೆ ಕಡಿಮೆ ಮಾಡಲು ರೋಗಲಕ್ಷಣ ಇಲ್ಲದ ಸೋಂಕಿತರನ್ನು ಮನೆಯಲ್ಲಿ ಚಿಕಿತ್ಸೆಗೆ ಒಳಪಡಿಸಬೇಕು ಹೋಮ್ ಐಸೋಲೇಷನ್ ಮಾಡಿ ಸರ್ಕಾರದ ವತಿಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂದು ಸಲಹೆ ನೀಡಲಾಗಿದೆ ಎನ್ನಲಾಗಿದೆ.