
ಬೆಂಗಳೂರು: ಕೊರೋನಾ ಕರ್ತವ್ಯಕ್ಕೆ ನಿಯೋಜಿತರಾದ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕರು ಕೊರೋನಾ ಕೆಲಸಕ್ಕೆ ಭಯದಿಂದ ಬರುತ್ತಿಲ್ಲ. ಅಂತಹ ನೌಕರರಿಗೆ ನೋಟೀಸ್ ನೀಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೊರೋನಾ ಕೆಲಸಕ್ಕೆ ಬಾರದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೊರೋನಾಗೆ ಆತಂಕಪಡುವ ಅಗತ್ಯವಿಲ್ಲ. ಕೊರೋನಾ ವಾರಿಯರ್ಸ್ ಬೇಡಿಕೆಗೆ ಸ್ಪಂದಿಸಲಾಗಿದೆ ಎಂದು ಹೇಳಿದ್ದಾರೆ.