ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ಅಧಿಕೃತ ಘೋಷಣೆ ಬಾಕಿ ಇದೆ.
ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 73 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಂತಾಗಿದೆ.
ಮೃತಪಟ್ಟವರಲ್ಲಿ ಇಬ್ಬರನ್ನು ಬೌರಿಂಗ್ ಆಸ್ಪತ್ರೆಯಿಂದ ಮತ್ತು ಮತ್ತಿಬ್ಬರನ್ನು ರಾಜೀವ್ ಗಾಂಧಿ ಹಾಗೂ ಖಾಸಗಿ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ನಾಲ್ವರ ಆರೋಗ್ಯ ಪರಿಸ್ಥಿತಿ ಸುಧಾರಿಸದ ಕಾರಣ ವೆಂಟಿಲೇಟರ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.