![](https://kannadadunia.com/wp-content/uploads/2020/08/coronavirus-vial.jpg)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7 ಲಕ್ಷ ಗಡಿ ದಾಟಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 10,517 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 7,00,786 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು 102 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 9891 ಮಂದಿ ಸಾವನ್ನಪ್ಪಿದ್ದಾರೆ. 5,69,947 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 1,20,929 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 4563 ಜನರಿಗೆ ಸೋಂಕು ತಗುಲಿದ್ದು ಒಟ್ಟು ಸೋಂಕಿತರ ಸಂಖ್ಯೆ 2,76,934 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 30 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 3320 ಜನ ಸೋಂಕಿತರು ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. 2,08,702 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 64,911 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.