![](https://kannadadunia.com/wp-content/uploads/2020/09/corona-.jpg)
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 8477 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,43,848 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು 85 ಮಂದಿ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 10,283 ಜನ ಸಾವನ್ನಪ್ಪಿದ್ದಾರೆ. 6,20,008 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,13,538 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 3788 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಖಿತರ ಸಂಖ್ಯೆ 2,97,193 ಕ್ಕೆ ಏರಿಕೆಯಾಗಿದೆ. 2,28,462 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು ಬೆಂಗಳೂರಲ್ಲಿ 45 ಮಂದಿ ಮೃತಪಟ್ಟಿದ್ದು, ಇದುವರೆಗೆ 3462 ಮಂದಿ ಸಾವನ್ನಪ್ಪಿದ್ದಾರೆ. 65,268 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.