alex Certify ಇನ್ನೇನು ಕೊರೋನಾ ಕಡಿಮೆಯಾಗ್ತಿದೆ ಎನ್ನುವಾಗಲೇ ಮತ್ತೊಂದು ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನೇನು ಕೊರೋನಾ ಕಡಿಮೆಯಾಗ್ತಿದೆ ಎನ್ನುವಾಗಲೇ ಮತ್ತೊಂದು ಶಾಕ್

ರಾಜ್ಯದಲ್ಲಿ ಮಾರಕ ಕೊರೋನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಮೊದಲ ವ್ಯಕ್ತಿ ಮೃತಪಟ್ಟಿದ್ದ ಕಲಬುರಗಿಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.

ಕಲಬುರ್ಗಿಯ ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 57 ವರ್ಷದ ವ್ಯಕ್ತಿ ಸಾವನ್ನಪ್ಪಿರುವುದಾಗಿ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಕಲಬುರ್ಗಿ ಇಎಸ್ಐ ಆಸ್ಪತ್ರೆಯಲ್ಲಿ 422 ನೇ ಸೋಂಕಿತ ಮೃತಪಟ್ಟಿದ್ದಾರೆ. ಕಲಬುರ್ಗಿ ಜಿಲ್ಲೆಯ ಆಳಂದ ಮೂಲದವರಾಗಿರುವ ಮೃತ ವ್ಯಕ್ತಿಗೆ ಏಪ್ರಿಲ್ 22ರಂದು ಕೊರೋನಾ ಇರುವುದು ದೃಢಪಟ್ಟಿತ್ತು. ಕೆಲವು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಚಿಕಿತ್ಸೆಗಾಗಿ ಹೋಗಿ ಬಂದಿದ್ದರು. ಬಳಿಕ ಅವರಿಗೆ ಕೊರೋನಾ ಸೋಂಕು ಲಕ್ಷಣ ಕಂಡು ಬಂದಿದ್ದು ಕಲಬುರ್ಗಿಯ ಇಎಸ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ 57 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...