ಬೆಂಗಳೂರು: ಮಾರಕ ಕೊರೊನಾ ಸೋಂಕಿಗೆ ಪೊಲೀಸ್ ಇಲಾಖೆಯ ಇಬ್ಬರು ಮೃತಪಟ್ಟಿದ್ದಾರೆ. ಎಸ್ಐ ಮತ್ತು ಹೆಡ್ ಕಾನ್ಸ್ ಟೇಬಲ್ ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಪೊಲೀಸ್ ಠಾಣೆಯೊಂದರ ಹೆಡ್ ಕಾನ್ಸ್ ಟೇಬಲ್ ಹಾಗೂ ವೈಟ್ ಫೀಲ್ಡ್ ಪೊಲೀಸ್ ಠಾಣೆಯ ಎಎಸ್ಐ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಎಎಸ್ಐ, ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೈದ್ಯಕೀಯ ವರದಿಯಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ ಈಗಾಗಲೇ ಪೊಲೀಸ್ ಇಲಾಖೆಯ ನಾಲ್ವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆನ್ನಲಾಗಿದೆ.