alex Certify ಶಾಕಿಂಗ್…! ಬೆಂಗಳೂರಲ್ಲಿ 138 ಮಂದಿ ಸೇರಿ ರಾಜ್ಯದಲ್ಲಿ ಒಂದೇ ದಿನ 337 ಜನರಿಗೆ ಕೊರೋನಾ ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್…! ಬೆಂಗಳೂರಲ್ಲಿ 138 ಮಂದಿ ಸೇರಿ ರಾಜ್ಯದಲ್ಲಿ ಒಂದೇ ದಿನ 337 ಜನರಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದು ದಿನ 337 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 8281 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 10 ಮಂದಿ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 124 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 138 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಲಬುರ್ಗಿ ಜಿಲ್ಲೆಯಲ್ಲಿ 52, ಬಳ್ಳಾರಿ 37, ಹಾಸನ 18, ದಕ್ಷಿಣ ಕನ್ನಡ 13, ದಾವಣಗೆರೆ 12, ಉಡುಪಿ 11, ಬೀದರ್ 10, ಮೈಸೂರು, ಕೊಪ್ಪಳ ತಲಾ 6 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಯಾದಗಿರಿ, ಕೋಲಾರ, ಬೆಂಗಳೂರು ಗ್ರಾಮಾಂತರ ತಲಾ 4, ಮಂಡ್ಯ, ಧಾರವಾಡ, ಚಿಕ್ಕಬಳ್ಳಾಪುರ, ಬಾಗಲಕೋಟೆ, ರಾಮನಗರ ತಲಾ 3, ತುಮಕೂರು, ಚಿಕ್ಕಮಗಳೂರು ತಲಾ 2, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 2943 ಸಕ್ರಿಯ ಪ್ರಕರಣಳಿದ್ದು, 78 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...