ಬೆಂಗಳೂರು: ರಾಜ್ಯದಲ್ಲಿ ಇಂದು 3649 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 71,069 ಕ್ಕೆ ಏರಿಕೆಯಾಗಿದೆ.
ಇವತ್ತು ರಾಜ್ಯದಲ್ಲಿ 1664 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 25,459 ಜನ ಬಿಡುಗಡೆಯಾಗಿದ್ದು 44,140 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,. 583 ಜನ ಐಸಿಯುನಲ್ಲಿದ್ದಾರೆ. ರಾಜ್ಯದಲ್ಲಿ ಇಂದು 61 ಮಂದಿ ಮೃತಪಟ್ಟಿದ್ದು, ಇದುವರೆಗೆ 1464 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ 1714 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 34,943 ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಇಂದು 22 ಮಂದಿ ಮೃತಪಟ್ಟಿದ್ದು, 720 ಜನ ಸಾವನ್ನಪ್ಪಿದ್ದಾರೆ. 26,746 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7,476 ಜನ ಡಿಸ್ಚಾರ್ಜ್ ಆಗಿದ್ದಾರೆ.