alex Certify ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಸೋಂಕಿತರಿಗಿಂತ ಡಿಸ್ಚಾರ್ಜ್ ಆದವರ ಸಂಖ್ಯೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಸೋಂಕಿತರಿಗಿಂತ ಡಿಸ್ಚಾರ್ಜ್ ಆದವರ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 6706 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2,03,200 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 8609 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,21,242 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ 103 ಮಂದಿ ಮೃತಪಟ್ಟಿದ್ದು, ಇದುವರೆಗೆ 3613 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 78,337 ಸಕ್ರಿಯ ಪ್ರಕರಣಗಳಿದ್ದು 727 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 1893 ಜನರಿಗೆ ಕೊರೊನಾ ಸೋಂಕು ತಗುಲಿದ್ದು ಒಟ್ಟು ಸೋಂಕಿತರ ಸಂಖ್ಯೆ 81,733 ಕ್ಕೆ ಏರಿಕೆಯಾಗಿದೆ. ಇವತ್ತು 2212 ಜನ ಬಿಡುಗಡೆಯಾಗಿದ್ದು ಇದುವರೆಗೆ 47,246 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 33,148 ಸಕ್ರಿಯ ಪ್ರಕರಣಗಳಿದ್ದು ಇವತ್ತು 22 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇದುವರೆಗೆ 1338 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...