alex Certify ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಗುಣಮುಖರಾದವರ ಸಂಖ್ಯೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಗುಣಮುಖರಾದವರ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇವತ್ತು 7040 ಮಂದಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,26,966 ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 6680 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 1,41,491 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 124 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3947 ಕ್ಕೆ ಏರಿಕೆಯಾಗಿದೆ. 81,512 ಸಕ್ರಿಯ ಪ್ರಕರಣಗಳಿದ್ದು 692 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇವತ್ತು 2131 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 89,811 ಕ್ಕೆ ಏರಿಕೆಯಾಗಿದ್ದು ಇವತ್ತು 2356 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ 53,782 ಸೋಂಕಿತರು ಬಿಡುಗಡೆಯಾಗಿದ್ದು, 34,584 ಪ್ರಕರಣಗಳಿವೆ. 49 ಸೋಂಕಿತರು ಬೆಂಗಳೂರಿನಲ್ಲಿ ಇಂದು ಮೃತಪಟ್ಟಿದ್ದು, ಇದುವರೆಗೆ 1444 ಜನ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...