
ಬೆಂಗಳೂರು: ರಾಜ್ಯದಲ್ಲಿ ಇಂದು 8793 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 6,20,630 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 7094 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 4,99,506 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 1,11,986 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 125 ಮಂದಿ ಮೃತಪಟ್ಟಿದ್ದು ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9119 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 4259 ಹೊಸ ಪ್ರಕರಣ ದಾಖಲಾಗಿದ್ದು 47 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.