ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾದ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ.
ಕಂಟೇನ್ಮೆಂಟ್ ಪ್ರದೇಶದಲ್ಲಿ ವಾಸವಾಗಿರುವವರು, ಕಚೇರಿಗೆ ಬರಲು ಸಾಧ್ಯವಾಗದವರು ಮತ್ತು ಕೊರೋನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಗೆ ಒಳಪಟ್ಟಿರುವ ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಲು ಒಪ್ಪಿಗೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದು ಇದಕ್ಕೆ ಸ್ಪಂದಿಸಿರುವ ಸರ್ಕಾರ, ಕರ್ನಾಟಕ ಸಿವಿಲ್ ಸೇವೆಗಳ ನಿಯಮಾವಳಿಗಳಿಗೆ ತಿದ್ದುಪಡಿ ಮಾಡಿದೆ. ಕಂಟೇನ್ಮೆಂಟ್ ಪ್ರದೇಶದಲ್ಲಿ ವಾಸವಾಗಿರುವ ಸರ್ಕಾರಿ ನೌಕರರು ಕಚೇರಿಗೆ ಬರಲು ಸಾಧ್ಯವಾಗದ ನೌಕರರಿಗೆ 7 ದಿನಗಳವರೆಗೆ, ಕೊರೋನಾ ಸೋಂಕಿನಿಂದ ಕ್ವಾರಂಟೈನ್ ಗೆ ಒಳಗಾದ ನೌಕರರು 14 ದಿನ ಸಾಂದರ್ಭಿಕ ರಜೆ ಪಡೆಯಬಹುದು ಎಂದು ಹೇಳಲಾಗಿದೆ.