ಬೆಂಗಳೂರು: ಮುಂದಿನ 5 ತಿಂಗಳು ಇದೇ ಪರಿಸ್ಥಿತಿ ಇರುತ್ತದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ವೇಳೆಗೆ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗಲಿದೆ.
ಇಂತಹ ಸಂಕಷ್ಟ ಸದ್ಯಕ್ಕೆ ಬಗೆಹರಿಯುವುದಿಲ್ಲ. ಒಂದೆರಡು ದಿನಗಳಲ್ಲಿ ಮುಗಿಯುವುದಿಲ್ಲ. ಇದನ್ನು ನಿಭಾಯಿಸುವುದು ಅನಿವಾರ್ಯವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಒಂದೆರಡು ದಿನಗಳಲ್ಲಿ ಕೊರೋನಾ ಸಂಕಷ್ಟದ ಪರಿಸ್ಥಿತಿ ಮುಗಿದು ಎಲ್ಲವೂ ಬಗೆಹರಿಯವುದಿಲ್ಲ. ಇನ್ನೂ 4-5 ತಿಂಗಳು ಇದನ್ನು ನಿರ್ವಹಿಸಬೇಕು. ಆಗಸ್ಟ್ ಮತ್ತು ಸೆಪ್ಟೆಂಬರ್ ವೇಳೆಗೆ ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು ಪರಿಸ್ಥಿತಿಗೆ ನಾವು ಸಿದ್ಧವಾಗಬೇಕು ಎಂದು ಹೇಳಿದ್ದಾರೆ.