ಬೆಂಗಳೂರು: ಮಹಾಮಾರಿ ಕೊರೊನಾದಿಂದ ಗಂಡಾಂತರ ಎದುರಾಗಲಿದೆ. ಮೂರ್ನಾಲ್ಕು ತಿಂಗಳಲ್ಲಿ ಹಿಡಿತಕ್ಕೆ ಸಿಗದಂತೆ ಸೋಂಕು ವ್ಯಾಪಕವಾಗಿ ಹರಡಲಿದೆ ಎನ್ನಲಾಗಿದೆ.
ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಮಳೆಯ ಜೊತೆಗೆ ವಾತಾವರಣದಲ್ಲಿ ತೇವಾಂಶ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಚಳಿಗಾಲದಲ್ಲಿ ಕೊರೊನಾ ಹರಡುವಿಕೆಗೆ ವಾತಾವರಣ ಪೂರಕವಾಗಿದೆ. ಚೀನಾದಲ್ಲಿ ಚಳಿಗಾಲದಲ್ಲಿಯೇ ಕೊರೊನಾ ಸೋಂಕು ಉಲ್ಬಣಗೊಂಡಿತ್ತು. ಈಗ ಮತ್ತೆ ಚಳಿಗಾಲ ಎದುರಾಗತೊಡಗಿದ್ದು ಎಚ್ಚರಿಕೆ ವಹಿಸದಿದ್ದರೆ ಭಾರಿ ಸಂಕಷ್ಟ ಎದುರಿಸಬೇಕಾಗುತ್ತದೆ.
ರಾಜ್ಯದಲ್ಲಿ ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆಯಾಗುತ್ತಿವೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಕೊರೊನಾ ಆಟಾಟೋಪ ಹಿಡಿತಕ್ಕೆ ಸಿಗುವುದಿಲ್ಲ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮಳೆಯ ಜೊತೆಗೆ ವಾತಾವರಣದಲ್ಲಿ ತೇವಾಂಶ ಹೆಚ್ಚಳವಾದ ಹಿನ್ನೆಲೆಯಲ್ಲಿ ಚಳಿಗಾಲದಲ್ಲಿ ಕೊರೊನಾ ಹರಡುವಿಕೆ ಸಾಧ್ಯತೆ ಹೆಚ್ಚಿದೆ. ಎಚ್ಚರ ವಹಿಸದಿದ್ದರೆ ಭಾರಿ ಅಪಾಯ ಎದುರಾಗಲಿದೆ. ಸೋಂಕಿತರು, ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಬಹುದು ಎಂದು ಹೇಳಲಾಗಿದೆ.