alex Certify ರಾಜ್ಯದಲ್ಲಿಂದು ಕೊರೋನಾ ಆತಂಕದ ನಡುವೆಯೂ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ಆತಂಕದ ನಡುವೆಯೂ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಲ್ಲೇ ಇವತ್ತು ಆಶಾದಾಯಕ ಬೆಳವಣಿಗೆ ನಡೆದಿದೆ. ಇವತ್ತು ಒಂದೇ ದಿನ ಬರೋಬ್ಬರಿ 957 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 606 ಜನ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ಗುಣಮುಖರಾದವರ ಸಂಖ್ಯೆ ಇಂದು ಹೆಚ್ಚಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿಯಂತೆ ರಾಜ್ಯದಲ್ಲಿ ಇವತ್ತು 2228 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 31,105ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 957 ಮಂದಿ ಬಿಡುಗಡೆಯಾಗಿದ್ದು ಇದುವರೆಗೆ 12,833 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು 17 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 486 ಜನ ಸಾವನ್ನಪ್ಪಿದ್ದಾರೆ. 17,782 ಸಕ್ರಿಯ ಪ್ರಕರಣಗಳಿದ್ದು 457 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...