ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತಾಗಿ ಫೇಸ್ಬುಕ್ ನಲ್ಲಿ ಮಾಹಿತಿ ನೀಡಿರುವ ಅವರು, ನನಗೆ ಮತ್ತು ನನ್ನ ಪತ್ನಿ ಡಾ. ಕವಿತಾ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಯಾವುದೇ ಲಕ್ಷಣಗಳು ಇರಲಿಲ್ಲವಾದರೂ ಸ್ವಯಂಪ್ರೇರಿತವಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದೇವೆ. ಈ ವೇಳೆ ಕೊರೋನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ಬೆಂಬಲಿಗರು, ಸ್ನೇಹಿತರು ಭೇಟಿಗೆ ಬರಬಾರದು ಎಂದು ಮನವಿ ಮಾಡಿದ್ದು, ನಿಮ್ಮ ಹಾರೈಕೆ ನಮಗೆ ಶಕ್ತಿ ಎಂದು ಐವಾನ್ ಡಿಸೋಜಾ ತಿಳಿಸಿದ್ದಾರೆ.
ನಿನ್ನೆ ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದು ಅವರೊಂದಿಗೆ ಐವಾನ್ ಡಿಸೋಜ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಮಾಜಿ ಸಚಿವ ಯು.ಟಿ. ಖಾದರ್ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ನ ಹಲವು ನಾಯಕರು ಈ ಸಂದರ್ಭದಲ್ಲಿ ಅವರೆಲ್ಲರಿಗೂ ಕೊರೋನಾ ಸೋಂಕು ತಗಲುವ ಆತಂಕ ಎದುರಾಗಿದೆ ಎಂದು ಹೇಳಲಾಗಿದೆ.
https://www.facebook.com/ivandsouzamlc/posts/2214576362000957