alex Certify BIG NEWS: ಮಂಡ್ಯದಲ್ಲಿ ಕೊರೋನಾ ಸ್ಪೋಟ, 22 ಮಂದಿಗೆ ಕೊರೋನಾ ದೃಢ – ರಾಜ್ಯದಲ್ಲಿಂದು 54 ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಡ್ಯದಲ್ಲಿ ಕೊರೋನಾ ಸ್ಪೋಟ, 22 ಮಂದಿಗೆ ಕೊರೋನಾ ದೃಢ – ರಾಜ್ಯದಲ್ಲಿಂದು 54 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 54 ಜನರಿಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1146 ಕ್ಕೆ ಏರಿಕೆಯಾಗಿದೆ.

ಮಂಡ್ಯ ಜಿಲ್ಲೆಯಲ್ಲಿ 22, ಕಲಬುರ್ಗಿ 10, ಹಾಸನ 6, ಧಾರವಾಡ 4, ಯಾದಗಿರಿ 3, ಶಿವಮೊಗ್ಗ 2, ಕೋಲಾರ 3, ದಕ್ಷಿಣಕನ್ನಡ 2, ಉಡುಪಿ 1, ವಿಜಯಪುರದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ 37 ಮಂದಿ ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 497 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು ಒಂದೇ ದಿನ 36 ಪುರುಷರು, 18 ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ.  10 ಮಕ್ಕಳಿಗೂ ಸೋಂಕು ತಗುಲಿರುವುದು ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮುಂಬೈನಿಂದ ಬಂದಿದ್ದ ಎಲ್ಲಾ 22 ಜನರಿಗೆ ಕೊರೋನಾ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...