ಬೆಂಗಳೂರು: ಹೆಚ್ಚುತ್ತಿರುವ ಕೊರೋನಾ ತಡೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಪ್ರತಿ ಭಾನುವಾರ ಬಂದ್ ಮಾಡಲಾಗುವುದು.
ಜುಲೈ 5 ರ ಮುಂದಿನ ಭಾನುವಾರದಿಂದ ಪ್ರತಿ ಭಾನುವಾರ ಕಂಪ್ಲೀಟ್ ಲಾಕ್ಡೌನ್ ಜಾರಿಗೆ ನಿರ್ಧರಿಸಲಾಗಿದೆ. ಆಟೋ-ಟ್ಯಾಕ್ಸಿ, ಕ್ಯಾಬ್, ಬಸ್ ಯಾವುದು ಓಡಾಡುವುದಿಲ್ಲ. ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ ಇರುತ್ತದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದ್ದು, ನಾಳೆಯಿಂದ ರಾತ್ರಿ 8 ಗಂಟೆಯಿಂದ ಬೆಳಗ್ಗೆ 8 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಭಾನುವಾರ ಮಾತ್ರ ಅಗತ್ಯ ವಸ್ತು, ಸೇವೆ ಹೊರತುಪಡಿಸಿ ಉಳಿದ ಸೇವೆಗಳನ್ನು ಬಂದ್ ಮಾಡಲಾಗುವುದು. ನಂತರದಲ್ಲಿ ವಾರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು ಎನ್ನಲಾಗಿದೆ.