ಬೆಂಗಳೂರು: ಕೊರೋನಾ ಸೋಂಕು ತಡೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 3 ತೀರ್ಮಾನ ಕೈಗೊಳ್ಳಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಯುತ್ತಿದ್ದಂತೆ ಕಠಿಣ ಕ್ರಮ ಜಾರಿಗೊಳಿಸಲಾಗುತ್ತದೆ. ಲಾಕ್ ಡೌನ್ ಬದಲಾಗಿ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಲಾಗುವುದು. ವೀಕೆಂಡ್ ಸಂಪೂರ್ಣ ಬಂದ್ ಮಾಡಲಾಗುವುದು. ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡುವ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಿಎಂ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಆರ್. ಅಶೋಕ್, ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ಬಳಿಕ ಗಟ್ಟಿ ನಿರ್ಧಾರ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇಂದಿನ ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ. ಆ ನಿರ್ಧಾರಗಳು ಏನು ಎನ್ನುವುದನ್ನು ಮುಖ್ಯಮಂತ್ರಿಯವರೇ ಪ್ರಕಟಿಸುತ್ತಾರೆ ಎಂದು ತಿಳಿಸಿದ್ದಾರೆ.