ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗಿರುವ ಪ್ರದೇಶಗಳನ್ನು ಜೂನ್ 30ರವರೆಗೆ ಸಂಪೂರ್ಣ ಸೀಲ್ ಡೌನ್ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊರೋನಾ ತಡೆಯುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದ್ದು ಪರಿಣಾಮಕಾರಿ ಕ್ರಮಗಳ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಲು ಸೂಚನೆ ನೀಡಲಾಗಿದೆ.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್. ಅಶೋಕ್, ಇದುವರೆಗೆ ಸೋಂಕಿತರ ಮನೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿತ್ತು. ಇನ್ನು ಮುಂದೆ ಸೋಕಿತರು ಇರುವ ರಸ್ತೆ ಮತ್ತು ಅಕ್ಕಪಕ್ಕದ ಮನೆಗಳನ್ನು ಕೂಡ ಸೀಲ್ ಡೌನ್ ಮಾಡಲಾಗಿರುವುದು. ಕೊರೋನಾ ಪ್ರಕರಣ ಹೆಚ್ಚಾಗಿ ಕಂಡು ಬಂದ ಪ್ರದೇಶಗಳನ್ನು ಜೂನ್ 30ರವರೆಗೆ ಸೀಲ್ ಡೌನ್ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.