alex Certify ಕೊರೋನಾ ಸ್ಪೋಟದ ಆಘಾತಕಾರಿ ಮಾಹಿತಿ: ಸ್ಟೇಡಿಯಂಗಳಲ್ಲಿ ಕ್ವಾರಂಟೈನ್, ನಿಯಂತ್ರಣಕ್ಕೆ ಸಚಿವ ಕೆ. ಸುಧಾಕರ್ ಮಹತ್ವದ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಸ್ಪೋಟದ ಆಘಾತಕಾರಿ ಮಾಹಿತಿ: ಸ್ಟೇಡಿಯಂಗಳಲ್ಲಿ ಕ್ವಾರಂಟೈನ್, ನಿಯಂತ್ರಣಕ್ಕೆ ಸಚಿವ ಕೆ. ಸುಧಾಕರ್ ಮಹತ್ವದ ಸಲಹೆ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಂಗಳೂರಿನಲ್ಲಿ ಒಟ್ಟು ಕೊರೋನಾ ಪ್ರಕರಣಗಳಲ್ಲಿ 50% ಜನರು ಗುಣಮುಖರಾಗಿದ್ದು ಮನೆಗೆ ಹಿಂದಿರುಗಿದ್ದಾರೆ. ಇನ್ನು ಉಳಿದ 50% ಪ್ರಕರಣಗಳಲ್ಲಿ 97% ಜನರಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ. ಉಳಿದ 3% ಸೋಂಕಿತರಿಗೆ ಮಾತ್ರ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಸೋಂಕಿತರು ರೋಗ ತೀವ್ರವಾಗಿ ಉಲ್ಬಣವಾದ ನಂತರ ಆಸ್ಪತ್ರೆಗೆ ಬರುತ್ತಿದ್ದಾರೆ. ಕೊನೆಯ ಹಂತದಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಐಎಲ್‌ಐ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಜ್ವರ ತಪಾಸಣಾ ಕೇಂದ್ರಗಳಿಗೆ ತೆರಳಿ ತೋರಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಲ್ಲೂ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಯಾವುದೇ ಲಕ್ಷಣ ಕಂಡುಬಂದಲ್ಲಿ ಮನೆಯಲ್ಲಿರುವ ಯುವಕರು ಜವಾಬ್ದಾರಿಯಿಂದ ತುರ್ತಾಗಿ ತಪಾಸಣೆ ಮಾಡಿಸುವಂತೆ ಕೋರಿದ್ದಾರೆ.

ನಗರದಲ್ಲಿ ದೊಡ್ಡ ದೊಡ್ಡ ಸ್ಟೇಡಿಯಂ‌ಗಳನ್ನು ಕ್ವಾರಂಟೈನ್ ಕೇಂದ್ರವಾಗಿ ಮಾರ್ಪಾಡು ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಜುಲೈ, ಆಗಸ್ಟ್ ನಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿಯಾಗಲಿದೆ. ಹೋಟೆಲ್ ಗಳು ಆರಂಬವಾಗಿರುವುದರಿಂದ ಕ್ವಾರಂಟೈನ್ ಗೆ ಸ್ಥಳಾವಕಾಶ ಕೊರತೆಯಾಗಲಿದೆ. ಈ ಕಾರಣಕ್ಕೆ ದೊಡ್ಡ ಸ್ಟೇಡಿಯಂಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದ್ದಾರೆ.

ಬಿಬಿಎಂಪಿ ತಂಡ ರಚನೆ

ರೋಗ ಲಕ್ಷಣಗಳಿರುವವರನ್ನು ಪತ್ತೆ ಹಚ್ಚಿ ತಪಾಸಣೆಗೆ ಒಳಪಡಿಸಲು ಅನುವಾಗುವಂತೆ ಬಿಬಿಎಂಪಿ ವತಿಯಿಂದ 800 ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಮನೆಮನೆಗೆ ತೆರಳಿ ರೋಗ ಲಕ್ಷಣವಿರುವವರ ಸಮಿಕ್ಷೆ ನಡೆಸಲಿದ್ದಾರೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು. ಇದರಿಂದಾಗಿ ಸೋಂಕಿತರ ಪತ್ತೆಗೆ ಅನುಕೂಲವಾಗಲಿದ್ದು, ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ನೀಡಬಹುದು ಎಂದು ಹೇಳಿದ್ದಾರೆ.

ಬದಲಾದ ಕಂಟೈನ್‌ಮೆಂಟ್ ವ್ಯಾಖ್ಯಾನ

ನಗರದಲ್ಲಿ ಕಂಟೈನ್‌ಮೆಂಟ್ ಪ್ರದೇಶಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಕುರಿತಾಗಿಪ್ರತಿಕ್ರಿಯೆ ನೀಡಿದ ಅವರು, ಕಂಟೈನ್‌ಮೆಂಟ್ ಪ್ರದೇಶಗಳು ಈಗ ಮೊದಲಿನಂತಿಲ್ಲ. ಅದರ ವ್ಯಾಖ್ಯಾನ ಬದಲಾಗಿದೆ. ಮೊದಲು ಪೂರ್ಣ ವಾರ್ಡ್‌ಗಳನ್ನು ಅಥವಾ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಕಂಟೈನ್‌ಮೆಂಟ್ ಆಗಿ ಘೋಷಿಸಲಾಗುತ್ತಿತ್ತು. ಈಗ ಅದು ಕೇವಲ ಸೋಂಕಿತ ವ್ಯಕ್ತಿಯ ಮನೆಗೆ ಮಾತ್ರ ಸೀಮಿತವಾಗಿದೆ. ಆದ್ದರಿಂದ 1.2 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿನಲ್ಲಿ 60 ಕಂಟೈನ್‌ಮೆಂಟ್ ಜ಼ೋನ್ ಹೆಚ್ಚೇನು ಅಲ್ಲ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...