
ಪುಣೆಯ ಭಾರತೀಯ ಸೆರಂ ಸಂಸ್ಥೆ ಸಹಯೋಗದಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ ಕೋವಿಡ್ ಲಸಿಕೆ ಕೋವಿಶೀಲ್ಡ್ ಕ್ಲಿನಿಕಲ್ ಟ್ರಯಲ್ ನಡೆಸಲು ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜನ್ನು ಆಯ್ಕೆ ಮಾಡಿದೆ.
250 ಮಂದಿ ಸ್ವಯಂ ಸೇವಕರು ಪ್ರಯೋಗಕ್ಕೆ ಒಳಗಾಗಲು ಮುಂದೆ ಬಂದಿದ್ದು, ಇವರಲ್ಲಿ ಐವರಿಗೆ ಶನಿವಾರ ಪ್ರಾಯೋಗಿಕವಾಗಿ ಲಸಿಕೆ ನೀಡಲಾಗುವುದು. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 105ನೇ ಜನ್ಮದಿನವಾದ ಆಗಸ್ಟ್ 29 ರಂದು ಲಸಿಕೆ ಕ್ಲಿನಿಕಲ್ ಟ್ರಯಲ್ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.