alex Certify ರಾಜ್ಯದಲ್ಲಿಂದು ಎಲ್ಲಾ ಜಿಲ್ಲೆಗಳಿಗೂ ಕೊರೋನಾ ದಾಳಿ, 457 ಮಂದಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಎಲ್ಲಾ ಜಿಲ್ಲೆಗಳಿಗೂ ಕೊರೋನಾ ದಾಳಿ, 457 ಮಂದಿ ಗಂಭೀರ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂದು ಕೊರೋನಾ ಪಾಸಿಟಿವ್ ವರದಿ ಬಂದಿದೆ. ವಿಜಯಪುರದಲ್ಲಿ ಒಬ್ಬರಿಗೆ, ಬೆಂಗಳೂರು ನಗರ ಜಿಲ್ಲೆಯಲ್ಲಿ 1373 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ದಕ್ಷಿಣ ಕನ್ನಡ 167, ಕಲಬುರ್ಗಿ 85, ಧಾರವಾಡ 75, ಮೈಸೂರು 52, ಬಳ್ಳಾರಿ 41, ದಾವಣಗೆರೆ 40, ಶಿವಮೊಗ್ಗ 37, ಬಾಗಲಕೋಟೆ 36, ಕೋಲಾರ 34, ಚಿಕ್ಕಬಳ್ಳಾಪುರ 32, ತುಮಕೂರು 27, ಮಂಡ್ಯ 24, ಉತ್ತರಕನ್ನಡ 23 ಜನರಿಗೆ ಕೊರೋನಾ ಸೋಂಕು ತಗುಲಿದೆ.

ಉಡುಪಿ 22, ಹಾಸನ 21, ಹಾವೇರಿ 18, ರಾಮನಗರ 17, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ 16, ಬೀದರ್ 15, ಚಾಮರಾಜನಗರ 12, ಬೆಳಗಾವಿ 9, ಗದಗ 6, ಚಿಕ್ಕಮಗಳೂರು 5, ಕೊಡಗು 4, ಕೊಪ್ಪಳ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ ಇಬ್ಬರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಇಂದು 2228 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 31,105 ಕ್ಕೆ ಏರಿಕೆಯಾಗಿದೆ. ಇಂದು 957 ಮಂದಿ ಬಿಡುಗಡೆಯಾಗಿದ್ದು ಇದುವರೆಗೆ 12,833 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು 17 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 486 ಜನ ಸಾವನ್ನಪ್ಪಿದ್ದಾರೆ. 17,782 ಸಕ್ರಿಯ ಪ್ರಕರಣಗಳಿದ್ದು 457 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...