ಬೆಂಗಳೂರು: ಉಡುಪಿಯಲ್ಲಿ ಇವತ್ತು 61 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಉಡುಪಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 471 ಕ್ಕೆ ಏರಿಕೆಯಾಗಿದ್ದು ಇದುವರೆಗೆ 84 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಯಾದಗಿರಿಯಲ್ಲಿ 9 ಹೊಸ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ರಾಯಚೂರಿನಲ್ಲಿ ಇವತ್ತು 35 ಸೇರಿ ಒಟ್ಟು 268 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ದಾವಣಗೆರೆಯಲ್ಲಿ ಕೊರೊನಾ ಸೋಂಕಿನಿಂದ ಇವತ್ತು ಮತ್ತೊಬ್ಬರು ಸಾವನ್ನಪ್ಪಿದ್ದು ಇದುವರೆಗೆ ದಾವಣಗೆರೆ ಜಿಲ್ಲೆಯಲ್ಲಿ ಐವರು ಮೃತಪಟ್ಟಂತಾಗಿದೆ. ರಾಜ್ಯದಲ್ಲಿ ಕೊರೋನಾದಿಂದ ಮೃತರ ಸಂಖ್ಯೆ 54 ಕ್ಕೆ ಏರಿಕೆಯಾಗಿದೆ.