
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸ್ಪೋಟವಾಗಿದ್ದು, ಬರೋಬ್ಬರಿ 267 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾಗಿದೆ.
ಇವತ್ತು ಒಂದೇ ದಿನ 267 ಮಂದಿಗೆ ಸೋಂಕು ತಗುಲಿದ್ದು, ಇವರಲ್ಲಿ 250 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದಾರೆ. ಇವತ್ತು 111 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 1514 ಜನ ಬಿಡುಗಡೆಯಾದಂತಾಗಿದೆ.
2494 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ಒಟ್ಟು 53 ಮಂದಿ ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. 16 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.