
ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 378 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5000 ಗಡಿದಾಟಿದೆ. 59 ಮಂದಿ ಮೃತಪಟ್ಟಿದ್ದು, 1968 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
