alex Certify ಕಲಬುರಗಿ 48, ಬೆಂಗಳೂರು 35 ಮಂದಿಗೆ ಕೊರೋನಾ ದೃಢ: ಇಲ್ಲಿದೆ ಜಿಲ್ಲಾವಾರು ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಬುರಗಿ 48, ಬೆಂಗಳೂರು 35 ಮಂದಿಗೆ ಕೊರೋನಾ ದೃಢ: ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 213 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7213 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 180 ಮಂದಿ ಬಿಡುಗಡೆಯಾಗಿದ್ದು ಇದುವರೆಗೆ 4135 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2987 ಸಕ್ರಿಯ ಪ್ರಕರಣಗಳು ಇದ್ದು, ಇವರಲ್ಲಿ 56 ಮಂದಿ ಐಸಿಯುನಲ್ಲಿ ದಾಖಲಾಗಿದ್ದಾರೆ.

ಇಂದು ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ 103 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು 23 ಮಂದಿ ಅಂತರರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ. ಇವತ್ತು ಒಂದೇ ದಿನ ರಾಜ್ಯದಲ್ಲಿ ಇಬ್ಬರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು ಇದುವರೆಗೆ 88 ಜನ ಸಾವನ್ನಪ್ಪಿದ್ದಾರೆ.

ಇಂದು ಕಲಬುರಗಿ ಜಿಲ್ಲೆಯಲ್ಲಿ 48, ಬೆಂಗಳೂರು ನಗರ 35, ಧಾರವಾಡ 34, ದಕ್ಷಿಣಕನ್ನಡ 23, ರಾಯಚೂರು 18, ಯಾದಗಿರಿ 13, ಬೀದರ್ 11, ಬಳ್ಳಾರಿ 10, ಕೊಪ್ಪಳ 4, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ ತಲಾ 3, ಉಡುಪಿ, ಹಾವೇರಿ, ರಾಮನಗರ ತಲಾ 2, ಹಾಸನ, ದಾವಣಗೆರೆ ತಲಾ ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...