ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 120 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾಗಿದೆ.
ಇವತ್ತು 257 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ 2862 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3108 ಸಕ್ರಿಯ ಪ್ರಕರಣಗಳು ಇದ್ದು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೋನಾ ಸೋಂಕಿನಿಂದ ರಾಜ್ಯದಲ್ಲಿ ಇವತ್ತು ಒಂದೇ ದಿನ ಮೂವರು ಮೃತಪಟ್ಟಿದ್ದಾರೆ. ಸೋಂಕಿನಿಂದ ಒಟ್ಟು 69 ಮಂದಿ ಮೃತಪಟ್ಟಿದ್ದಾರೆ. ಇವತ್ತು ಪತ್ತೆಯಾದ 120 ಪ್ರಕರಣಗಳಲ್ಲಿ 68 ಮಂದಿ ಅಂತರರಾಜ್ಯ ಮತ್ತು ಮೂವರು ಅಂತರರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.