ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಮದುವೆಯಲ್ಲಿ ಭಾಗವಹಿಸಿದ್ದ ಒಂದೇ ಕುಟುಂಬದ 32 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಲ್ಲಿ ವರನ ತಂದೆ ಮತ್ತು ವಧುವಿನ ತಾಯಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಜೂನ್ 29 ರಂದು ರಾಣೆಬೆನ್ನೂರಿನ ಮಾರುತಿ ನಗರದ ನಿವಾಸಿಯ ಮದುವೆ ಸಮಾರಂಭ ನಡೆದಿದ್ದು 55 ವರ್ಷದ ವರನ ತಂದೆಗೆ ಜ್ವರ ಕಾಣಿಸಿಕೊಂಡಿದ್ದು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷಿಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಅವರು ಜುಲೈ 7ರಂದು ಚಿಕಿತ್ಸೆ ಫಲಕಾರಿಯಾಗದೆ ದಾವಣಗೆರೆಯಲ್ಲಿ ಮೃತಪಟ್ಟಿದ್ದಾರೆ.
ನಂತರ 4 ದಿನಗಳಲ್ಲಿ ವಧುವಿನ ತಾಯಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಒಂದೇ ಕುಟುಂಬದ 38 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು ಅವರಲ್ಲಿ 32 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎನ್ನಲಾಗಿದೆ.