
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2313 ಜನರಿಗೆ ಕೊರೋನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಬೆಂಗಳೂರಿನಲ್ಲಿ 1447 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಇಂದು 57 ಜನ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲೇ ಬರೋಬ್ಬರಿ 29 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
