ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 635 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬೆಳಗ್ಗೆ 5 ಮಂದಿಗೆ ಸೋಂಕು ತಗುಲಿದ್ದು ಪತ್ತೆಯಾಗಿದ್ದು, ಸಂಜೆ ವೇಳೆಗೆ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 635 ಕ್ಕೆ ಏರಿಕೆಯಾಗಿದೆ. ಅಚ್ಚರಿಯೆಂದರೆ ಒಂದೇ ಜಿಲ್ಲೆಯಲ್ಲಿ 21 ಪ್ರಕರಣ ದಾಖಲಾಗಿವೆ. ದಾವಣಗೆರೆಯಲ್ಲಿ 21 ಮಂದಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಕಲಬುರ್ಗಿ 6, ಬೆಂಗಳೂರು 4, ಬಾಗಲಕೋಟೆ 3 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 34 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.