ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 161 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾಗಿದೆ. ಇವತ್ತು ಕಂಡು ಬಂದ ಹೊಸ ಪ್ರಕರಣಗಳ ಪೈಕಿ 91 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು 24 ಮಂದಿ ಅಂತರರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ.
ರಾಜ್ಯದಲ್ಲಿ ಇಂದು 164 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 2605 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೋನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು ಒಟ್ಟು 66 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 3248 ಸಕ್ರಿಯ ಪ್ರಕರಣಗಳು ಇದ್ದು, 12 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.