
ಬೆಂಗಳೂರು: ಯಾದಗಿರಿ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 61 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 642 ಕ್ಕೆ ಏರಿಕೆಯಾಗಿದೆ. 91 ಮಂದಿ ಬಿಡುಗಡೆಯಾಗಿದ್ದು 550 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು 29 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 23, ಕಲಬುರ್ಗಿ ಜಿಲ್ಲೆಯಲ್ಲಿ 10, ಬೀದರ್ 9, ದಾವಣಗೆರೆ 8, ಕೊಪ್ಪಳ 6, ಶಿವಮೊಗ್ಗ 4, ವಿಜಯಪುರ, ಚಿಕ್ಕಬಳ್ಳಾಪುರ, ಮೈಸೂರು, ಧಾರವಾಡ ತಲಾ 2, ಬಾಗಲಕೋಟೆ, ತುಮಕೂರು, ಚಾಮರಾಜನಗರದಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು 161 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾಗಿದೆ.