ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಕೊರೋನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ.
ಈಗ ಮಾಜಿ ಸಚಿವ ಜಮೀರ್ ಅಹಮದ್ ಮತ್ತು ಸಂಸದ ಶ್ರೀನಿವಾಸ ಪ್ರಸಾದ್ ಹಾಗೂ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಸುಮಾರು 3 -4 ಸಲ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದ ಜಮೀರ್ ಅಹಮ್ಮದ್ ಅವರಿಗೆ ನೆಗೆಟಿವ್ ವರದಿ ಬಂದಿದ್ದು, ಸೋಮವಾರ ಜ್ವರ ಕಾಣಿಸಿಕೊಂಡ ನಂತರ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿದೆ.