
ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 257 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸಂಖ್ಯೆ 4320 ಕ್ಕೆ ಏರಿಕೆಯಾಗಿದೆ.
2651 ಸಕ್ರಿಯ ಪ್ರಕರಣಗಳು ಇದ್ದು 13 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು 106 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಒಟ್ಟು 1610 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇವತ್ತು ಪತ್ತೆಯಾದ 257 ಪ್ರಕರಣಗಳಲ್ಲಿ 155 ಅಂತರರಾಜ್ಯ ಪ್ರಯಾಣಿಕರಿದ್ದು ಒಬ್ಬರು ಅಂತರರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.
