alex Certify ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಕೊರೋನಾ: ಬೆಂಗಳೂರು 783 ಸೇರಿ 1267 ಮಂದಿಗೆ ಸೋಂಕು ದೃಢ, ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಕೊರೋನಾ: ಬೆಂಗಳೂರು 783 ಸೇರಿ 1267 ಮಂದಿಗೆ ಸೋಂಕು ದೃಢ, ಜಿಲ್ಲಾವಾರು ಮಾಹಿತಿ

 ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸ್ಫೋಟವಾಗಿದ್ದು, ಬರೋಬ್ಬರಿ 1267 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ ದಾಖಲೆಯ 783 ಮಂದಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 27 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಧಾರವಾಡ, ಮೈಸೂರು ತಲಾ 18, ಬಾಗಲಕೋಟೆ 17, ಉತ್ತರ ಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್, ಚಿತ್ರದುರ್ಗ ತಲಾ 7, ರಾಯಚೂರು, ಮಂಡ್ಯ, ದಾವಣಗೆರೆ ಜಿಲ್ಲೆಯಲ್ಲಿ ತಲಾ 6 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಕೊಡಗು ತಲಾ 3, ತುಮಕೂರು 2, ಯಾದಗಿರಿ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.

ಇಂದಿನ 1267 ಹೊಸ ಪ್ರಕರಣ ಸೇರಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13190 ಕ್ಕೆ ಏರಿಕೆಯಾಗಿದೆ. 7507 ಜನ ಬಿಡುಗಡೆಯಾಗಿದ್ದು, 5472 ಸಕ್ರಿಯ ಪ್ರಕರಣಗಳಿದ್ದು, 243 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇವತ್ತು 16 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು ಇದರೊಂದಿಗೆ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...