ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂದೇ ದಿನ ಬರೋಬ್ಬರಿ 16 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು ಇದರೊಂದಿಗೆ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ.
1267 ಜನರಿಗೆ ಒಂದೇ ದಿನ ಸೋಂಕು ತಗಲಿದ್ದು ಒಟ್ಟು ಸೋಂಕಿತರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ. ಒಂದೇ ದಿನ ಇಷ್ಟೊಂದು ಹೊಸ ಪ್ರಕರಣಗಳು ವರದಿಯಾಗಿದ್ದು ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ. ಇದುವರೆಗೆ 7507 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 5472 ಸಕ್ರಿಯ ಪ್ರಕರಣಗಳಿದ್ದು, ಬರೋಬ್ಬರಿ 243 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದೇ ದಿನ ದಾಖಲೆಯ 783 ಮಂದಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 27 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಧಾರವಾಡ, ಮೈಸೂರು ತಲಾ 18, ಬಾಗಲಕೋಟೆ 17, ಉತ್ತರಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್, ಚಿತ್ರದುರ್ಗ ತಲಾ 7, ರಾಯಚೂರು, ಮಂಡ್ಯ, ದಾವಣಗೆರೆ ಜಿಲ್ಲೆಯಲ್ಲಿ ತಲಾ 6 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಕೊಡಗು ತಲಾ 3, ತುಮಕೂರು 2, ಯಾದಗಿರಿ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.