ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 2062 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗಿನ ದಾಖಲೆ ಹಿಂದಿಕ್ಕಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
ಇವತ್ತು ಒಂದೇ ದಿನ 2062 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 1148 ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿ 13 ಜನ ಸೇರಿದಂತೆ ರಾಜ್ಯದಲ್ಲಿ ಇವತ್ತು ಒಂದೇ ದಿನ 54 ಜನ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.