ಬೆಂಗಳೂರು: 2020 -21 ನೇ ಶೈಕ್ಷಣಿಕ ವರ್ಷಾರಂಭಕ್ಕೆ ಕೊರೋನಾ ಅಡ್ಡಿಯಾಗಿದೆ. ಹೀಗಾಗಿ ಶೇಕಡ 30 ರಷ್ಟು ಪಠ್ಯ ಕಡಿತಗೊಳಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.
ಆಗಸ್ಟ್ 15 ರ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗದಂತೆ ಮಕ್ಕಳ ಪಠ್ಯದಲ್ಲಿ ಶೇಕಡ 30 ರಷ್ಟು ಕಡಿತ ಮಾಡಲಾಗುವುದು. ಈಗಾಗಲೇ ಬಹುತೇಕ ತಾಲೂಕು, ಜಿಲ್ಲಾ ಕೇಂದ್ರಗಳಿಗೆ ಪಠ್ಯಪುಸ್ತಕ ಪೂರೈಕೆಯಾಗಿದ್ದು, ಕಡಿತಗೊಂಡ ಪಠ್ಯವನ್ನು ಮಕ್ಕಳಿಗೆ ಬೋಧಿಸಬಾರದು ಸೂಚನೆ ನೀಡಲಾಗುವುದು ಎನ್ನಲಾಗಿದೆ.
ಕೊರೊನಾ ಸೋಂಕು ಹೆಚ್ಚುತ್ತಲೇ ಇರುವುದರಿಂದ ಶೇಕಡ 30ರಷ್ಟು ಪಠ್ಯ ಕಡಿತಕ್ಕೆ ಸೂಚಿಸಲಾಗಿದೆ. ಈ ಕುರಿತು ಇನ್ನೂ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ