ಬೆಂಗಳೂರು: ಕೊರೋನಾ ಸೋಂಕಿತರಲ್ಲಿ ಭೇದಭಾವ ಮಾಡದೇ ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
ಎಲ್ಲರಿಗೂ ಸುಲಭವಾಗಿ ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಹಿಂದಿನ ಕಾಂಗ್ರೆಸ್ ಸರ್ಕಾರ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತಂದಿದ್ದು ನಂತರದಲ್ಲಿ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತಂದಿದೆ. ಹೀಗಿದ್ದರೂ ಖಾಸಗಿ ಆಸ್ಪತ್ರೆಗಳಲ್ಲಿ ಲೂಟಿಗೆ ಏಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಸರ್ಕಾರವನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಜನರ ರಕ್ಷಣೆಗಾಗಿ ಚಿಕಿತ್ಸಾ ದರ ಏರಿಕೆ ಮತ್ತು ಸರ್ಕಾರದ ವೈಫಲ್ಯ ವಿರೋಧಿಸಿ ಜೂನ್ 29 ರಂದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಸೋಂಕಿತರಲ್ಲಿ ಭೇದಭಾವ ಮಾಡದೇ ಎಲ್ಲರಿಗೂ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.