ಬೆಂಗಳೂರು: ಸರ್ಕಾರದ ಆದೇಶ ಉಲ್ಲಂಘಿಸಿದ 19 ಆಸ್ಪತ್ರೆಗಳಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಲಾಗಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗೆ ಬೆಡ್ ಮೀಸಲಿಡದ ಹಿನ್ನೆಲೆಯಲ್ಲಿ 19 ಖಾಸಗಿ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದು ಮಾಡಲಾಗಿದೆ.
ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯ ಈ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಚಿಕಿತ್ಸೆಗೆ ಶೇಕಡ 50 ರಷ್ಟು ಬೆಡ್ ಮೀಸಲಿಡಲು ನೋಟಿಸ್ ಜಾರಿ ಮಾಡಲಾಗಿತ್ತು.
ಆದರೂ ಕೂಡ ಕೊರೊನಾ ಚಿಕಿತ್ಸೆಗೆ ಬೆಡ್ ಮೀಸಲಿಡದ ಹಿನ್ನೆಲೆಯಲ್ಲಿ 19 ಖಾಸಗಿ ಆಸ್ಪತ್ರೆಗಳ ಎದುರು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ. ಜೊತೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಹೇಳಲಾಗಿದೆ.