alex Certify ನಿಯಮ ಉಲ್ಲಂಘಿಸಿ ಒಂದೇ ವಾರದಲ್ಲಿ 5 ಮದುವೆ ಮಾಡಿದ ಗ್ರಾಮಸ್ಥರಿಗೆ ʼಬಿಗ್ ಶಾಕ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಮ ಉಲ್ಲಂಘಿಸಿ ಒಂದೇ ವಾರದಲ್ಲಿ 5 ಮದುವೆ ಮಾಡಿದ ಗ್ರಾಮಸ್ಥರಿಗೆ ʼಬಿಗ್ ಶಾಕ್ʼ

ರಾಯಚೂರು ತಾಲೂಕಿನ ಗಡಿಭಾಗದ ತಲಮಾರಿ ಗ್ರಾಮದಲ್ಲಿ ಸರ್ಕಾರದ ನಿಯಮ ಉಲ್ಲಂಘಿಸಿ ಮದುವೆ ಮಾಡಲಾಗಿದೆ. ಇದರ ಪರಿಣಾಮ ಗ್ರಾಮದ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶುಕ್ರವಾರ ಗ್ರಾಮವನ್ನು ಸೀಲ್ ಮಾಡಲಾಗಿದೆ.

ಗ್ರಾಮದಲ್ಲಿ ಒಂದೇ ದಿನ 38 ಪ್ರಕರಣ ಪತ್ತೆಯಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ನಿಯಮ ಉಲ್ಲಂಘಿಸಿ 5 ಮದುವೆಗಳು ನಡೆದಿವೆ. ಯಾವುದೇ ಪರವಾನಿಗೆ ಪಡೆಯದೆ ಮದುವೆ ನಡೆಸಲಾಗಿದ್ದು, ಇದರ ಪರಿಣಾಮ ಊರಿನ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಕೃಷಿ ಚಟುವಟಿಕೆ ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಗ್ರಾಮದಿಂದ ಯಾರೂ ಹೊರಗೆ ಹೋಗುವಂತಿಲ್ಲ, ಯಾರೂ ಬರುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಶಾಲೆಯಲ್ಲಿ ಕಂಟ್ರೋಲ್ ರೂಮ್ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಮನೆ ಬಾಗಿಲಿಗೆ ಅಗತ್ಯವಸ್ತುಗಳನ್ನು ಪೂರೈಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...