ಜೋಯಿಡಾ: ಸೇತುವೆ ಮೇಲಿನಿಂದ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಜಾರಿ ಕಾಳಿನದಿಗೆ ಬಿದ್ದು ನಾಪತ್ತೆಯಾಗಿದ್ದ ಪ್ರೇಮಿಗಳು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸೂಪಾ ಡ್ಯಾಂ ಬಳಿ ನಡೆದಿದೆ.
ಮೃತರನ್ನು ಗುಲಬರ್ಗಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಹಾಗೂ ಪುರುಷೋತ್ತಮ್ ಎಂದು ಗುರುತಿಸಲಾಗಿದೆ. ಇಬ್ಬರೂ ನಿನ್ನೆ ಜೋಯಿಡಾ ತಾಲೂಕಿನ ಗಣೇಶಗುಡಿಗೆ ಪ್ರವಾಸಕ್ಕೆ ಬಂದಿದ್ದರು.
ಹುಲಿಗೆ ಚಳ್ಳೆಹಣ್ಣು ತಿನಿಸಿದ ಮಂಗ: ವಿಡಿಯೋ ವೈರಲ್
ಈ ವೇಳೆ ಸೂಪಾ ಡ್ಯಾಂ ಬಳಿಯ ಕಾಳಿಸೇತುವೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು. ಈ ವೇಳೆ ಇಬ್ಬರೂ ಆಯತಪ್ಪಿ ನದಿಗೆ ಬಿದ್ದಿದ್ದಾರೆ. ನಿನ್ನೆ ತಡರಾತ್ರಿವರೆಗೂ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನದಿಗೆ ಬಿದ್ದ ಜೋಡಿಗಾಗಿ ಶೋಧ ನಡೆಸಿತ್ತು. ಆದರೆ ಪ್ರೇಮಿಗಳ ಸುಳಿವು ಸಿಕ್ಕಿರಲಿಲ್ಲ. ಇಂದು ಮತ್ತೆ ಶೋಧಕಾರ್ಯ ಮುಂದುವರೆಸಿದಾಗ ಇಬ್ಬರ ಶವ ಪತ್ತೆಯಾಗಿದೆ.