ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಾಲುಗೊಡನಹಳ್ಳಿಯಲ್ಲಿ ಉಸಿರುಗಟ್ಟಿಸಿ ವೃದ್ಧ ದಂಪತಿಯನ್ನು ಹತ್ಯೆ ಮಾಡಲಾಗಿದೆ.
ಮುರುಳೀಧರ(80), ಮಾದೇವಿ(70) ಹತ್ಯೆಯಾದವರು ಎಂದು ಹೇಳಲಾಗಿದೆ. ಆಸ್ತಿ ವಿಚಾರವಾಗಿ ದಂಪತಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೆನ್ನರಾಯಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.