alex Certify BIG NEWS: ಕೊರೊನಾಗೆ ಬ್ರೇಕ್ ಹಾಕಲು ಮತ್ತೊಂದು ಮಹತ್ವದ ಹೆಜ್ಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾಗೆ ಬ್ರೇಕ್ ಹಾಕಲು ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಐ.ಐ.ಎಸ್.ಸಿ. ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐ.ಐ.ಎಸ್.ಸಿ. ಕ್ಯಾಂಪಸ್ ನಲ್ಲಿ ಚಾಲನೆ ನೀಡಿ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಹಸ್ತಾಂತರಿಸಿದ್ದಾರೆ.

ಇದು ಬಯೋ ಸುರಕ್ಷತೆ ಪ್ರಮಾಣೀಕರಣ ಹೊಂದಿರುವ ಅತ್ಯಂತ ಸುಸಜ್ಜಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಆಗಿದ್ದು ಕೇವಲ 4 ಗಂಟೆಗಳಲ್ಲಿ ಟೆಸ್ಟ್ ವರದಿ ಪಡೆಯಬಹುದಾಗಿದೆ. ದಿನಕ್ಕೆ ಸುಮಾರು 400 ಟೆಸ್ಟ್ ನಡೆಸುವ ಸಾಮರ್ಥ್ಯ ಹೊಂದಿರುವ ಈ ಲ್ಯಾಬ್ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಟೆಸ್ಟ್ ನಡೆಸಲು ಬಳಸಬಹುದಾಗಿದೆ.

ಐ.ಐ.ಎಸ್.ಸಿ. ನಿರ್ದೇಶಕ, ರಾಜೀವ್ ಗಾಂಧಿ ವಿವಿ ಉಪಕುಲಪತಿ ಡಾ.ಸಚ್ಚಿದಾನಂದ ಅವರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...