ಬೆಂಗಳೂರು: ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯಾವುದೇ ರೋಗಲಕ್ಷಣ ಇಲ್ಲದ ಅವರು ಕೋವಿಡ್ ಪರೀಕ್ಷೆ ಮಾಡಿಸಿದ ಸಂದರ್ಭದಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಕ್ಷೇತ್ರದ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಮ್ಮೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಿವಲಿಂಗೇಗೌಡರು ಮನವಿ ಮಾಡಿದ್ದಾರೆ.